28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆ: ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಧರ್ಮಸ್ಥಳ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಕರ್ನಾಟಕದ ವತಿಯಿಂದ ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಶ್ರೀ ಧ ಮ ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಸ್ಕೌಟ್ಸ್, ಗೈಡ್ಸ್, ಕಬ್ಸ್ ಹಾಗೂ ಬುಲ್ ಬುಲ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಗೈದಿದ್ದಾರೆ.

ಕಬ್ಸ್ ವಿಭಾಗ ಪ್ರಥಮ ಸ್ಥಾನ ಪಡೆದು, ಬುಲ್ ಬುಲ್ ವಿಭಾಗ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಸ್ಕೌಟ್ಸ್ ವಿಭಾಗ ತೃತೀಯ ಸ್ಥಾನ ಪಡೆದಿದೆ. ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ.ವಿ. ಅವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶ್ರೀಮತಿ ಅಮೃತ ವಿ. ಶೆಟ್ಟಿ, ಶ್ರೀಮತಿ ಪದ್ಮಶ್ರೀ, ಶ್ರೀಮತಿ ಹೇಮಾವತಿ ಜೈನ್ ಹಾಗೂ ಶ್ರೀಮತಿ ಪ್ರೀತಿ ಅವರು ತರಬೇತಿ ಮತ್ತು ಪ್ರೋತ್ಸಾಹ ನೀಡಿದರು.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

Suddi Udaya
error: Content is protected !!