25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಪ್ರಯುಕ್ತ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಅವರ ಭೇಟಿ

ಬೆಳ್ತಂಗಡಿ: ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ನಡೆಯುತ್ತಿರುವ ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಅಂಗವಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿ (ಶ್ರೀ ಧರ್ಮಸ್ಥಳ ಮೇಳ)ಯ ಮೇಲ್ವಿಚಾರಕರೂ, ಯಕ್ಷಗಾನದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಅವರನ್ನು ಭೇಟಿ ಮಾಡಿ, ಮೇಳದ ಯಶಸ್ವಿ ತಿರುಗಾಟಕ್ಕಾಗಿ ಅವರ ಮಾರ್ಗದರ್ಶನ, ಅಮೂಲ್ಯ ಸಲಹೆ ಹಾಗೂ ಆಶೀರ್ವಾದವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ಡಿ. ಹರ್ಷೇಂದ್ರ ಕುಮಾರ್ ಅವರು ಮೇಳದ ಕಾರ್ಯಚಟುವಟಿಕೆಗಳ ಕುರಿತು ಆತ್ಮೀಯವಾಗಿ ವಿಚಾರಿಸಿ, ಕಲಾ ಸೇವೆ ನಿರಂತರವಾಗಿ ಬೆಳೆಯಲಿ ಎಂದು ಶುಭ ಹಾರೈಸಿ ತಮ್ಮ ಆಶೀರ್ವಾದವನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿನ ಕಾನೂನು ಸಲಹೆಗಾರರೂ, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ, ಶ್ರೀ ಗೆಜ್ಜೆಗಿರಿ ಮೇಳದ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್ ಕಾರ್ಕಳ, ಶ್ರೀ ಗುರು ನಾರಾಯಣ ಸೇವಾ ಸಂಘ, ಬೆಳ್ತಂಗಡಿ ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು, ಶ್ರೀ ಕ್ಷೇತ್ರದ ಆಡಳಿತ ಸಮಿತಿ ಸದಸ್ಯರಾದ ನಾರಾಯಣ ಮಚ್ಚಿನ, ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಪಂಚದುರ್ಗಾ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya
error: Content is protected !!