28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ (ರಿ.) ಬೆಳ್ತಂಗಡಿ ಆಶ್ರಯದಲ್ಲಿ ಸೆ. 6ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆ. 23ರಂದು ಬಂಟರ ಭವನದಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಕ್ಕಳು ನವಶಕ್ತಿ, ಗುರುವಾಯನಕೆರೆ, ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬೆಂಗಳೂರು ಬಂಟರ ಸಂಘ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಬಂಟರ ಸಂಘದ ಉಪಾಧ್ಯಕ್ಷರಾದ ರಾಜು ಶೆಟ್ಟಿ ಬೆಂಗತ್ಯಾರು, ಉಮೇಶ್ ಶೆಟ್ಟಿ ದುರ್ಗಾ, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ರವಿ ಶೆಟ್ಟಿ ಸುಕ್ಕೇರಿ, ವಿದ್ಯಾನಿಧಿ ಸಂಚಾಲಕ ಹಾಗೂ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ ಶೆಟ್ಟಿ ಕೊರ್ಯಾರು, ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ವಸುಧಾ ಪಿ. ಶೆಟ್ಟಿ ಹಾಗೂ ಯುವ ವಿಭಾಗದ ಅಧ್ಯಕ್ಷ ಅಜೇಯ್ ಜೆ ಶೆಟ್ಟಿ ಭಂಡಾರಿಗುಡ್ಡೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!