25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರುಡ್‌ಸೆಟ್ ತರಬೇತಿದಾರರಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆಯುತ್ತಿರುವ ಅಸಿಸ್ಟೆಂಟ್ ಬುಕ್‌ಕೀಪರ್ ಹಾಗೂ ವಸ್ತ್ರಚಿತ್ರಕಲಾ–ಲಘು ಉದ್ಯಮಿ ತರಬೇತಿಯ ಶಿಬಿರಾರ್ಥಿಗಳು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.

ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಆಧುನಿಕ ಜಗತ್ತಿನಲ್ಲಿ ನಿರಂತರವಾಗಿ ಬದಲಾವಣೆಗಳು ನಡೆಯುತ್ತಿದ್ದು, ಅದರೊಂದಿಗೆ ನಾವು ಕೂಡ ಬದಲಾಗುತ್ತಾ ಬೆಳೆಯಬೇಕು. ಹೊಸ ತಂತ್ರಜ್ಞಾನ, ಹೊಸ ಆಲೋಚನೆ ಮತ್ತು ಹೊಸತನವನ್ನು ಉದ್ಯಮದಲ್ಲಿ ಅಳವಡಿಸಿಕೊಳ್ಳಬೇಕು. ಯಾವುದೇ ವ್ಯವಹಾರವನ್ನು ಪ್ರಾಮಾಣಿಕತೆ ಹಾಗೂ ಗುಣಮಟ್ಟದೊಂದಿಗೆ ನಡೆಸಿದಾಗ ಯಶಸ್ಸು ಸಾಧ್ಯ ಎಂದು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಯಲ್ಲಿ ಪಡೆಯುತ್ತಿರುವ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಉದ್ಯೋಗದ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಕಲಿತ ಕೌಶಲ್ಯವನ್ನು ಕೇವಲ ಉದ್ಯೋಗಕ್ಕಾಗಿ ಬಳಸದೆ, ಇತರರಿಗೂ ಉದ್ಯೋಗಾವಕಾಶ ಕಲ್ಪಿಸುವ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಅವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಸುನಿಲ್ ಜಿ. ನಾಯಕ್, ಹಿರಿಯ ಉಪನ್ಯಾಸಕರಾದ ಕರುಣಾಕರ ಜೈನ್, ಅತಿಥಿ ಉಪನ್ಯಾಸಕರಾದ ಸಚಿನ್ ಹಾಗೂ ಶ್ರೀಮತಿ ರಶ್ಮಿ ರಾಘವೇಂದ್ರ, ಸುರೇಶ ಗೌಡ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಖೋ. ಖೋ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!