25.2 C
ಪುತ್ತೂರು, ಬೆಳ್ತಂಗಡಿ
October 9, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಜಿರೆ: ಎಸ್.ಡಿ.ಎಂ. ಪಾಲಿಟೆಕ್ನಿಕ್‌ನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಲಿಟಿ ಆಸ್ಪತ್ರೆ, ಜೆಸಿಐ ಉಜಿರೆ ಸಿಟಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ರೆಡ್ ಕ್ರಾಸ್ ರಕ್ತನಿಧಿ, ಮಂಗಳೂರು ಘಟಕದ ಸಹಯೋಗದೊಂದಿಗೆ ಆ. 22ರಂದು ಕಾಲೇಜಿನ ಸಭಾಂಗಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ರೋಟೇರಿಯನ್ ಶ್ರೀಧರ್ ಕೆ.ವಿ., ಜೆಸಿಐ ಉಜಿರೆ ಸಿಟಿ ಅಧ್ಯಕ್ಷ ಮಹಮ್ಮದ್ ಮಿರ್ಶಾದ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮೇಘ ನಾಯ್ಕ ಅವರು ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಎನ್‌ಎಸ್‌ಎಸ್ ಯೋಜನಾಧಿಕಾರಿ ಸಾಯಿಚರಣ್ ಸಿ.ಹೆಚ್. ಹಾಗೂ ವೈಆರ್‌ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ. ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 39 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿ ರೋಟೇರಿಯನ್ ಡಾ. ರಾಘವೇಂದ್ರ ಪಿದಮಲೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರೋಟೇರಿಯನ್ ವಿದ್ಯಾಕುಮಾರ್ ಅವರು 55ನೇ ಬಾರಿ ರಕ್ತದಾನ ಮಾಡುವ ಮೂಲಕ ವಿಶೇಷವಾಗಿ ಗಮನ ಸೆಳೆದರು. ಅವರ ನಿರಂತರ ರಕ್ತದಾನ ಸೇವೆ ಶ್ಲಾಘನೀಯವಾಗಿದೆ.

Related posts

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya
error: Content is protected !!