25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗೆಜ್ಜೆಗಿರಿಯಲ್ಲಿ ಆಯುರ್ವೇದಿಕ್ ಕೇಂದ್ರ ಕಾಮಗಾರಿ ಪ್ರಗತಿ ಕುರಿತು ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಚರ್ಚೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ದೇಯಿ ಬೈದೆತಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿ ಪ್ರಗತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿ ಮನವಿ ಸಲ್ಲಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕಾನೂನು ಸಲಹೆಗಾರ ರಕ್ಷಿತ್ ಶಿವರಾಮ್ ಅವರ ನೇತೃತ್ವದಲ್ಲಿ ಕ್ಷೇತ್ರದ ಪ್ರಮುಖರು ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ, ಆಯುರ್ವೇದಿಕ್ ಕೇಂದ್ರದ ಕಾಮಗಾರಿಯ ಪ್ರಸ್ತುತ ಪ್ರಗತಿ, ಮುಂದಿನ ಹಂತದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಸಹಕಾರದ ಕುರಿತು ವಿವರವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಕಾರ್ಯದರ್ಶಿ ಡಾ. ರಾಜಾರಾಮ್, ಹರೀಶ್ ಕೆ ಪೂಜಾರಿ ಬೈಲಾಬರಿ, ನಾರಾಯಣ ಮಚ್ಚಿನ, ಸತೀಶ್ ಕಾಶಿಪಟ್ಣ ಸೇರಿದಂತೆ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಹಾಗೂ ದೇಯೀ ಬೈದೆತಿ ಆಯುರ್ವೇದಿಕ್ ಕೇಂದ್ರವನ್ನು ಸಮರ್ಪಕವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ನೀಡುವಂತೆ ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು.

Related posts

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya
error: Content is protected !!