33.4 C
ಪುತ್ತೂರು, ಬೆಳ್ತಂಗಡಿ
October 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಉಪ್ಪಿನಂಗಡಿ : ಆರ್.ಕೆ.ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ರಲ್ಲಿ ಆರ್.ಕೆ.ಚಿನ್ನದಂಗಡಿಯಲ್ಲಿ ಕಳ್ಳತನ ಪ್ರಕರಣ ಸಂಬಂಧ ರಾಜಸ್ಥಾನ ರಾಜ್ಯದ ಬೂಂದಿ ಜಿಲ್ಲೆಯ ಗುರುದ್ವಾರ ಹತ್ತಿರ ಡೊಂಗ್ರಿ ನಿವಾಸಿ ಮೊಹಮ್ಮದ್ ಮಗ ಜಮಿಲ್ ಚಾಚಾ(62) ಎಂಬಾತ ಬಂಧನವಾಗಿ ಜೈಲು ಶಿಕ್ಷೆ ಅನುಭವಿಸಿ ಬಳಿಕ ನ್ಯಾಯಾಲಯದ ವಿಚಾರಣೆಗೆ ಕಳೆದ ನಾಲ್ಕು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಹೆಚ್.ಸಿ. ಗಜೇಂದ್ರ ನಾಯ್ಕ್ ಮತ್ತು ರಾಮಣ್ಣ ಗೌಡ ಆ.22 ರಂದು ರಾಜಸ್ಥಾನ ರಾಜ್ಯದ ಬೂಂದಿ ಜಿಲ್ಲೆಯ ತಿರತ್ ಮೇರಾನ್ ಎಂಬಲ್ಲಿದ್ದ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕರೆತಂದು ಆ.24 ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು.ಆರೋಪಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಧಿಸಿದೆ. ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಇನ್ಸ್‌ಪೆಕ್ಟರ್ ನಾಗರಾಜ್. ಹೆಚ್.ಇ ನೇತೃತ್ವದಲ್ಲಿ ಉಪ್ಪಿನಂಗಡಿ ಸಬ್ ಇನ್ಸ್‌ಪೆಕ್ಟರ್ ಸುತೇಶ್ ತಂಡದ ಸಿಬ್ಬಂದಿ ಗಜೇಂದ್ರ ನಾಯ್ಕ್ ಮತ್ತು ರಾಮಣ್ಣ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!