25.2 C
ಪುತ್ತೂರು, ಬೆಳ್ತಂಗಡಿ
October 10, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ನಡ: “ಹದಿಹರೆಯದ ವಿದ್ಯಾರ್ಥಿಗಳಿಗೆ ಸಮಯ ಮತ್ತು ಪ್ರೀತಿಯನ್ನು ನೀಡಿ ಅವರ ಅವಶ್ಯಕತೆಯನ್ನು ಈಡೇರಿಸಿ ಆದರೆ ಆಡಂಬರವನ್ನು ಕೊಡಬೇಡಿ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ.” ಎಂದು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಆಂಟನಿ ಟಿ.ಪಿ. ಇವರು ಪೋಷಕರಿಗೆ ಕರೆ ನೀಡಿದರು.

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪೋಷಕರ ಸಭೆಯನ್ನು ಉದ್ದೇಶಿಸಿ ಇವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ.ವಿ. ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪೋಷಕರಿಗೆ ಮಾರ್ಗದರ್ಶನ ಮಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಹಿರಿಯ ಉಪನ್ಯಾಸಕಿ ವಸಂತಿ ಪಿ ಇವರು ಪೋಷಕರಿಗೆ ಕಿವಿ ಮಾತು ಹೇಳಿದರು.

ಇತಿಹಾಸ ಉಪನ್ಯಾಸಕರಾದ ಸವಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರಾವ್ಯ ಧನ್ಯವಾದವಿತ್ತರು. ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya
error: Content is protected !!