25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸಮಗ್ರ ಅಭಿವೃದ್ಧಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸುವ ಉದ್ದೇಶದಿಂದ, ಶ್ರೀ ಕ್ಷೇತ್ರದ ಕಾನೂನು ಸಲಹೆಗಾರ ಹಾಗೂ ಯುವ ನಾಯಕ ರಕ್ಷಿತ್ ಶಿವರಾಂ ಅವರ ಮುಂದಾಳತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಕಾರ್ಯಗಳು, ಆಡಳಿತ ವ್ಯವಸ್ಥೆ,ಭರದಿಂದ ನಡೆಯುತ್ತಿರುವ ಯಾತ್ರಿನಿವಾಸದ ಕಾಮಗಾರಿ ಸೇರಿದಂತೆ ವಿವಿಧ ಯೋಜನೆಗಳ ಕುರಿತು ವಿವರವಾದ ವಿಚಾರ ವಿನಿಮಯ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಡುವೆ ಸದಾ ನಿಕಟವಾದ ಆತ್ಮೀಯ ಸಂಬಂಧವಿದ್ದು, ಧರ್ಮಸ್ಥಳದ ಆಶೀರ್ವಾದವು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮೇಲಿರಲಿದೆ ಎಂದು ಡಾ. ವೀರೇಂದ್ರ ಹೆಗ್ಗಡೆಯವರು ಹೃತ್ಪೂರ್ವಕವಾಗಿ ಆಶೀರ್ವದಿಸಿ, ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಶುಭ ಹಾರೈಸಿದರು.

ಈ ಭೇಟಿಯ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿoಬಿ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿಗಳೂ, ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ , ಕ್ಷೇತ್ರದ ವಾಸ್ತುತಜ್ಞ ಪ್ರಮಲ್ ಕುಮಾರ್ ಕಾರ್ಕಳ, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿಯ ಪಅಧ್ಯಕ್ಷರೂ,, ಕ್ಷೇತ್ರದ ಟ್ರಸ್ಟಿಯೂ ಆಗಿರುವ ಜಯ ವಿಕ್ರಮ ಕಲ್ಲಾಪು, ಶ್ರೀ ಕ್ಷೇತ್ರದ ಟ್ರಸ್ಟಿ ಯೂ,ಗೆಜ್ಜೆಗಿರಿ ಮೇಳದ ಪ್ರಧಾನ ಸಂಚಾಲಕರೂ ಆಗಿರುವ ನಿತ್ಯಾನಂದ ನಾವರ, ಕ್ಷೇತ್ರದ ಟ್ರಸ್ಟಿ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ರಾಘವೇಂದ್ರ ಮಠದ ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya
error: Content is protected !!