25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ

ಬೆಳ್ತಂಗಡಿ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಲಾಯಿಲ ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆ. 29ರ ಶನಿವಾರದಿಂದ ಆ. 31ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಅವರ ಆಶೀರ್ವಾದವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರು ಆರಾಧನ ಮಹೋತ್ಸವದ ಕುರಿತು ಸಂಪೂರ್ಣ ಮಾಹಿತಿಯನ್ನು ವಿಚಾರಿಸಿ, ಕಾರ್ಯಕ್ರಮದ ಯಶಸ್ಸಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಹಾಗೂ ತಮ್ಮ ಆಶೀರ್ವಾದವನ್ನು ನೀಡಿದರು.

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಉತ್ಸವ ಸಮಿತಿ ಸದಸ್ಯರಾದ ನಾರಾಯಣ ಮಚ್ಚಿನ, ನಿತ್ಯಾನಂದ ನಾವರ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!