28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ವ್ಯವಹಾರ ನಡೆಸಿ ಸಾಧನೆ ಮಾಡಿರುವ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಹಣಧಿಕಾರಿ ಮಮತಾ ಜಿ ಪ್ರಶಸ್ತಿ ಸ್ವೀಕರಿಸಿದರು..

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಆಡಳಿತ ಮಂಡಳಿ ಸದಸ್ಯರಾದ ಭಾಸ್ಕರ್ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ,ಡಾ ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್,ಎಂ ಮಹೇಶ್ ಹೆಗ್ಡೆ, ಎಸ್ ಎನ್ ಮನ್ಮಥ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್ ಉಪಸ್ಥಿತರಿದ್ದರು.

ದ ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಸಿ ಇ ಒ ಕಿಶೋರ್ ಹಾಗೂ ಸಂಘದ ಲೆಕ್ಕಿಗ ಶ್ರೀಮತಿ ನಿಶ್ಮಿತಾ ಕೆ, ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಅಕ್ಷತಾ ಹಾಗೂ ಕು.ಶ್ರುತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!