34.2 C
ಪುತ್ತೂರು, ಬೆಳ್ತಂಗಡಿ
October 12, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ. ಗೀತಾ ಬಿ. ಶೆಟ್ಟಿ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೊಪತಿ (NIN) ಪುಣೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪಥಿ ಅಂಡ್ ಯೋಗಿಕ್ ಸೈನ್ಸಸ್, ಉಜಿರೆಯ ಪ್ರಾಧ್ಯಾಪಕಿ ಹಾಗೂ ಡೀನ್ ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಗೀತಾ ಬಿ. ಶೆಟ್ಟಿ ಅವರು ಭಾರತ ಸರ್ಕಾರದ ಆಯುಷ್ ಸಚಿವಾಲಯದ, ದೇಶದ ಪ್ರತಿಷ್ಠಿತ ಸ್ವಾಯತ್ತ ಸಂಸ್ಥೆ, ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆ (NIN), ಪುಣೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

ಮೂರು ದಶಕಗಳಿಗೂ ಅಧಿಕ ಅನುಭವ ಹೊಂದಿರುವ ಡಾ. ಗೀತಾ ಬಿ. ಶೆಟ್ಟಿ ಅವರು BNYS, MD (Clinical Naturopathy) ಹಾಗೂ Ph.D. (Naturopathy) ಪದವೀಧರರಾಗಿದ್ದು, ಶಿಕ್ಷಣ, ಸಂಶೋಧನೆ, ಚಿಕಿತ್ಸಾ ಸೇವೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಎಸ್‌ಡಿಎಂ ಸಂಸ್ಥೆಯಲ್ಲಿ ವಿವಿಧ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುವುದರೊಂದಿಗೆ ಹಲವಾರು ಸಂಶೋಧನಾ ಯೋಜನೆಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕ್ಷೇತ್ರದ ವೈಜ್ಞಾನಿಕ ಅಭಿವೃದ್ಧಿ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅದರ ಪ್ರಸಾರಕ್ಕೆ ಅವರ ಅನುಭವ ಮತ್ತು ನಾಯಕತ್ವವು NINಗೆ ಮತ್ತಷ್ಟು ಬಲ ನೀಡಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya
error: Content is protected !!