33.4 C
ಪುತ್ತೂರು, ಬೆಳ್ತಂಗಡಿ
October 9, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡದಿಂದ ಬಜಿಲ ಶಾಲೆಯಲ್ಲಿ ಶ್ರಮದಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಬಜಿಲ ಒಕ್ಕೂಟ ಹಾಗೂ ಸ್ವಸಹಾಯ ಸಂಘಗಳ ಸದಸ್ಯರ ಸಹಕಾರದೊಂದಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಜಿಲದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರಮದಾನದಲ್ಲಿ ಶಾಲಾ ಆವರಣದ ಸುತ್ತಮುತ್ತ ಬೆಳೆದಿದ್ದ ಕಳೆ, ಪೊದೆ ಹಾಗೂ ಅನಗತ್ಯ ಗಿಡಗಳನ್ನು ತೆರವುಗೊಳಿಸಿ ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರಗೊಳಿಸಲಾಯಿತು. ಜೊತೆಗೆ ಶಾಲೆಯ ಕೈತೋಟದಲ್ಲಿ ವಿವಿಧ ಜಾತಿಯ ಬಾಳೆ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡಲಾಯಿತು.

ಶ್ರಮದಾನ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಹರೀಶ್, ಬಜಿಲ ಒಕ್ಕೂಟದ ಅಧ್ಯಕ್ಷರಾದ ಲಿಂಗಪ್ಪ ಗೌಡ, ಸೇವಾ ಪ್ರತಿನಿಧಿ ಶ್ರೀಮತಿ ಕುಸುಮಾವತಿ, ಶಾಲಾ ಪೋಷಕರಾದ ಮೋಹನದಾಸ ಗೌಡ ಹಾಗೂ ಬಾಲಕೃಷ್ಣ ಗೌಡ ಅಡ್ಡಾರು ಸೇರಿದಂತೆ ಸ್ವಸಹಾಯ ಸಂಘಗಳ 25ಕ್ಕೂ ಹೆಚ್ಚು ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು.
ಸದಸ್ಯರ ಸಾಮೂಹಿಕ ಶ್ರಮ ಮತ್ತು ಸಹಕಾರದಿಂದ ಶಾಲಾ ಪರಿಸರ ಮತ್ತಷ್ಟು ಸ್ವಚ್ಛ, ಹಸಿರು ಹಾಗೂ ಆಕರ್ಷಕವಾಗಿ ರೂಪುಗೊಂಡಿತು.

Related posts

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಸೆ.29–30: ಬೆಳ್ತಂಗಡಿಯಲ್ಲಿ ರೂ.31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

Suddi Udaya

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟುಹಬ್ಬದ ಪ್ರಯುಕ್ತ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಆದಿಶಕ್ತಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!