33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.28: ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ರೂ 13 ಲಕ್ಷ ವಿದ್ಯಾರ್ಥಿವೇತನ ವಿತರಣೆ :

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ , ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಮಾಜದ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಹಾಗೂ 13 ಲಕ್ಷ ವಿದ್ಯಾರ್ಥಿವೇತನ ವಿತರಣೆ ಸಮಾರಂಭವು ಆ. 28, ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಆ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ವಹಿಸಲಿದ್ದು, ಮಾಜಿ ಸಚಿವರು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ಚನ್ನಬಸಪ್ಪ ಕೆ.ಎ.ಎಸ್., ಮೆಸ್ಕಾಂ ಮಂಗಳೂರು ಅಧ್ಯಕ್ಷ ಕೆ. ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ದೀಕ್ಷಿತಾ, ವಿಜಯ್ ಪಿ. ಪೂಜಾರಿ ಗ್ರೂಪ್ ಆಫ್ ಹೋಟೇಲ್ ಪಂಜುರ್ಲಿ ಹುಬ್ಬಳ್ಳಿ ಭಾಗವಹಿಸಲಿದ್ದಾರೆ. ಗುರು ಸಂದೇಶವನ್ನು ನಿತೇಶ್ ಪೂಜಾರಿ ಮಾರ್ನಾಡ್ ಅವರು ನೀಡಲಿದ್ದಾರೆ ಎಂದರು‌

ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ :ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟ, ಜಿಲ್ಲಾ ಮಟ್ಟ, ತಾಲೂಕು ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು

ಇದರೊಂದಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಸನ್ಮಾನ ಹಾಗೂ ಗೌರವಾರ್ಪಣೆ ನಡೆಯಲಿದೆ. ಪ್ರತಿಭಾವಂತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು 13 ಲಕ್ಷ ವಿದ್ಯಾರ್ಥಿವೇತನ ವಿತರಿಸಲಾಗುವುದು ಎಂದರು.

ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಾನವೀಯ ಸಂದೇಶವನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತಾಲೂಕಿನ ಎಲ್ಲಾ ಗ್ರಾಮಮಟ್ಟದ ಸಂಘಟನೆಗಳ ಸದಸ್ಯರು, ಸಮಾಜದ ಮುಖಂಡರು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ, ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್, ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ಗುಂಡೂರಿ, ನಾರಾಯಣ ಉಚ್ಚೂರು, ಚಂದ್ರಶೇಖರ ಇಂದಬೆಟ್ಟು, ಸಂತೋಷ್ ಕೆ.ಸಿ.,ಸುನಿಲ್ ಕನ್ಯಾಡಿ ಗುರುರಾಜ್,ರೂಪೇಶ್ ಕೆ ಧರ್ಮಸ್ಥಳ,ರಾಜಶ್ರೀ ರಮಣ್, ಉಷಾ ಕಿರಣ್,ಕಮಲಾಕ್ಷ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್‌ ಉಪಸ್ಥಿತರಿದ್ದರು.

Related posts

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya
error: Content is protected !!