28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿಯಲ್ಲಿ ಉಚಿತ ನೇತ್ರಾ ಚಿಕಿತ್ಸಾ ಶಿಬಿರ

ನಾರಾವಿ: ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ 15ನೇ ವರ್ಷದ ಶ್ರೀ ಅನಂತನೋಂಪಿ ಆರಾಧನಾ ಪೂಜೆಯ ಪ್ರಯುಕ್ತ ಶ್ರೀ ನೋಂಪಿ ವ್ರತಧಾರಿಗಳ ಮುಂದಾಳತ್ವದಲ್ಲಿ ಹಾಗೂ ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಸ್ಟ್ ಕಣ್ಣಿನ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಚಿತ ನೇತ್ರಾ ಚಿಕಿತ್ಸಾ ಶಿಬಿರವು ಜರುಗಿತು.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಶಿಬಿರವನ್ನು ಉದ್ಘಾಟಿಸಿ ಪಂಚೇಂದ್ರಿಯಗಳಲ್ಲಿ ಅತಿ ಮುಖ್ಯವಾದ ಕಣ್ಣಿನ ದೋಷಗಳನ್ನು ಆರಂಭದಲ್ಲೇ ಗುರುತಿಸಿ ಸರಿಯಾದ ಚಿಕಿತ್ಸೆ ಪಡೆಯುವುದು ಅತೀ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿಯ ಅನಂತೇಶ್ವರ ರೂರಲ್ ಕ್ಲಿನಿಕ್ ವೈದ್ಯ ಡಾ| ಶೀತಲ್ ಕುಮಾರ್ ರವರು ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು.

ವೇದಿಕೆಯಲ್ಲಿ ಶಿಬಿರದ ಸಂಯೋಜಕರಾದ ಶಿಶುಪಾಲ್ ಜೈನ್ , ನಾರಾವಿ ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜವರ್ಮ ಜೈನ್, ದಿಗಂಬರ ಜೈನ ಯುವ ಜನ ಸಂಘದ ಅಧ್ಯಕ್ಷ ಜಿನೇಂದ್ರ ಜೈನ್ , ಮಾನಸಿ ಮಹಿಳಾ ಸಂಘದ ಅಧ್ಯಕ್ಷೆ ಸುಮಿತ್ರಾ ಸನ್ಮತ್ ಕುಮಾರ್, ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾ| ಸಂಜನಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ಮಧುಕರ್ ಕನ್ನಾರ್ ಉಪಸ್ಥಿತರಿದ್ದರು.

ಸಂತೋಷ್ ಕೆಲ್ಲರವರು ಸ್ವಾಗತಿಸಿ, ಸುಮಿತ್ರಾ ವಂದಿಸಿದರು. ಶಿಕ್ಷಕರಾದ ನಿರಂಜನ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya
error: Content is protected !!