28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ ನೀಡುವ ‘ಬಸವಶ್ರೀ’ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ಸೂಟರ್‌ಪೇಟೆ ಅವರನ್ನು ಆಯ್ಕೆ ಮಾಡಿದೆ.

ಮಾಧ್ಯಮ ಕ್ಷೇತ್ರದಲ್ಲಿ 32 ವರ್ಷಗಳಿಂದ ಕ್ರೀಡಾ ಬರವಣಿಗೆ, ಕ್ರೀಡಾ ಅಂಕಣಕಾರರಾಗಿ ಗುರುತಿಸಿಕೊಂಡಿರುವ ಇವರು ಈವರೆಗೆ 4,500ಕ್ಕೂ ಅಧಿಕ ಕ್ರೀಡಾ ಲೇಖನ, ಅಂಕಣ ಬರಹ ಬರೆದಿದ್ದು, ಜಿಲ್ಲೆ, ರಾಜ್ಯ, ಅಂತಾರಾಜ್ಯಮಟ್ಟದ ವಿವಿಧ ಕನ್ನಡ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಸಾಧನೆ, ವಿವಿಧ ಕ್ರೀಡಾ ವಿಷಯಗಳ ಕುರಿತು ವಿಮರ್ಶಾತ್ಮಕ ಮತ್ತು ವಿಶ್ಲೇಷಣಾತ್ಮಕ ಬರಹಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಜಗದೀಶ್ಚಂದ್ರ ಅಂಚನ್ ಕನ್ನಡ ನಾಡಿಗೆ ಸಲ್ಲಿಸುತ್ತಿರುವ ಅನುಪಮ ಕ್ರೀಡಾ ಸಾಹಿತ್ಯ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಜೆಎಸ್‌ಎಸ್ ಸಭಾಂಗಣದಲ್ಲಿ ಆ.29ರಂದು ನಡೆಯಲಿರುವ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಬೆಳ್ಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಎಚ್.ಸೋಮಶೇಖರ್ ತಿಳಿಸಿದ್ದಾರೆ.

Related posts

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya
error: Content is protected !!