33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಗೀತಾ ಬಿ. ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಡಯೆಟ್ ಮತ್ತು ನ್ಯೂಟ್ರಿಷನ್ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ. (ಡಾ.) ಗೀತಾ ಬಿ. ಶೆಟ್ಟಿಯವರು ಪುಣೆಯ ಕೇಂದ್ರ ಆಯುಷ್ ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿಯ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆ.21 ರಂದು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಶೆಟ್ಟಿಯವರು ವಹಿಸಿ, ಸ್ವಾಗತಿಸಿದರು. ವೇದಿಕೆಯಲ್ಲಿ ಡಾ. ಬಾಲಕೃಷ್ಣ ಶೆಟ್ಟಿ, ಡಾ. ಬಿಂದು ಹಾಗೂ ಎಸ್‌ಡಿಎಂ ಆಸ್ಪತ್ರೆ, ಉಜಿರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ದನ್ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಡಾ. ಗೀತಾ ಬಿ. ಶೆಟ್ಟಿಯವರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರ ಸರಳತೆ, ಸಮರ್ಪಣಾ ಮನೋಭಾವ, ಬೋಧನಾ ಕ್ಷೇತ್ರದ ಸೇವೆ ಹಾಗೂ ಪ್ರಕೃತಿ ಚಿಕಿತ್ಸೆಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಲಾಯಿತು. ಜನಾರ್ದನ್ ಅವರು ಮಾತನಾಡಿ, ಡಾ. ಗೀತಾ ಬಿ. ಶೆಟ್ಟಿಯವರ ಹೊಸ ಜವಾಬ್ದಾರಿಯು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಮುಂದಿನ ಸೇವಾ ಪಯಣಕ್ಕೆ ಶುಭ ಹಾರೈಸಿದರು.

ನಂತರ ಡಾ. ಗೀತಾ ಬಿ. ಶೆಟ್ಟಿಯವರು ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡು, ಸಂಸ್ಥೆ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳಿಂದ ದೊರೆತ ಸಹಕಾರ ಮತ್ತು ಪ್ರೋತ್ಸಾಹವನ್ನು ಸ್ಮರಿಸಿದರು. ಹೊಸ ಜವಾಬ್ದಾರಿಯಲ್ಲಿ ಪ್ರಕೃತಿ ಚಿಕಿತ್ಸೆಯ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡುವ ಆಶಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಸಮಾರೋಪದಲ್ಲಿ ಡಾ. ಗೀತಾ ಬಿ. ಶೆಟ್ಟಿ ಹಾಗೂ ಡಾ. ಬಾಲಕೃಷ್ಣ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಶ್ವೇತಾ ಇವರು ಧನ್ಯವಾದ ಸಮರ್ಪಣೆ ಯನ್ನು ಸಲ್ಲಿಸಿದರು ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya
error: Content is protected !!