26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮ

ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ಹಾಗೂ ಕಾಲೇಜಿನ ಮಹಿಳಾ ಕೋಶದ ಸಹಯೋಗದಲ್ಲಿ ಪ್ರೌಢ ,ಪದವಿಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳು ಹಾಗೂ ಹೆಣ್ಣು ಮಕ್ಕಳಿಗೆ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಲಿಂಗಪ್ಪ ಮಾಸ್ತರ್ ಆಡಿಟೋರಿಯಂನಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ತಜ್ಞ ಆಪ್ತಸಮಾಲೋಚಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮೊದಲ ಗೋಷ್ಠಿಯಲ್ಲಿ ಶ್ರೀಮತಿ ಅಕ್ಷತಾ, ಹದಿಹರೆಯದ ಆಪ್ತಸಮಾಲೋಚಕರು, ತಾಲೂಕು ಆಸ್ಪತ್ರೆ, ಬಂಟ್ವಾಳ ಇವರು “ಹೆಣ್ಣು ಮಕ್ಕಳ ಆರೋಗ್ಯ” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹದಿಹರೆಯದ ಅವಧಿಯಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಹೆಣ್ಣುಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಆರೋಗ್ಯ ಸಮಸ್ಯೆಗಳ ಸಂದರ್ಭದಲ್ಲಿ ವೈದ್ಯಕೀಯ ಸಲಹೆ ಪಡೆಯುವ ಮಹತ್ವವನ್ನು ವಿವರಿಸಿದರು. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎರಡನೇ ಗೋಷ್ಠಿಯಲ್ಲಿ ಶ್ರೀಮತಿ ವಾಣಿ, ಐಸಿಟಿಸಿ , ಆಪ್ತಸಮಾಲೋಚಕರು, ತಾಲೂಕು ಆಸ್ಪತ್ರೆ, ಬಂಟ್ವಾಳ ಇವರು “ಎಚ್.ಐ.ವಿ ಕುರಿತು ಜಾಗೃತಿ” ಎಂಬ ವಿಷಯದ ಕುರಿತು ಮಾಹಿತಿ ನೀಡಿದರು. ಎಚ್.ಐ.ವಿ ಸೋಂಕಿನ ಕಾರಣಗಳು, ಹರಡುವ ವಿಧಾನಗಳು, ಮುನ್ನೆಚ್ಚರಿಕೆ ಕ್ರಮಗಳು, ಪರೀಕ್ಷೆಯ ಮಹತ್ವ ಮತ್ತು ಎಚ್.ಐ.ವಿ ಸೋಂಕಿತರ ಬಗ್ಗೆ ಸಮಾಜದಲ್ಲಿ ಇರಬೇಕಾದ ಮಾನವೀಯತೆ ಹಾಗೂ ಸಹಾನುಭೂತಿಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಆರೋಗ್ಯದ ಕುರಿತು ಯಾವುದೇ ಸಮಸ್ಯೆ ಎದುರಾದಾಗ ಸೂಕ್ತ ಆರೋಗ್ಯ ಕೇಂದ್ರದ ನೆರವು ಪಡೆಯುವಂತೆ ತಿಳಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ, ಸ್ವಚ್ಛತೆ ಮತ್ತು ಜವಾಬ್ದಾರಿಯುತ ಜೀವನಶೈಲಿಯ ಕುರಿತು ಅರಿವು ಮೂಡಿಸುವಲ್ಲಿ ಪರಿಣಾಮಕಾರಿಯಾಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಆರೋಗ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ಯಶಸ್ವಿಯಾಗಿ ನೆರವೇರಿತು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಜನಾಧಿಕಾರಿ ಜಯಶ್ರೀ ಸ್ವಾಗತಿಸಿ, ಯೋಜನಾಧಿಕಾರಿ ವಿಂದ್ಯಾಶ್ರೀ ಎ ವಂದಿಸಿದರು.

Related posts

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

Suddi Udaya
error: Content is protected !!