34.2 C
ಪುತ್ತೂರು, ಬೆಳ್ತಂಗಡಿ
October 12, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಆ.31: ಕಸ್ತೂರಿ ರಂಗನ್ ವರದಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಶಾಂತಿಯುತ ಮೆರವಣಿಗೆ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಮ ವಲಯ ಎಂಬ ಯೋಜನೆಯಿಂದ ಬೆಳ್ತಂಗಡಿ ತಾಲೂಕಿನ ಬಾಧಿತವಾಗುವ ಗ್ರಾಮಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಇದರ ವತಿಯಿದ ಆ.31ರಂದು ಬೆಳಿಗ್ಗೆ 11ಕ್ಕೆ ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ತಾಲೂಕು ಕಛೇರಿ ವರೆಗೆ ಶಾಂತಿಯುತ ಮೆರವಣಿಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಆರ್. ಭಾಸ್ಕರ್ ಸಾಲಿಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ ಜಿಲ್ಲೆಯ 44 ಗ್ರಾಮ ಪಂಚಾಯತ್ ಸೇರಿದಂತೆ ರಾಜ್ಯದ 1449 ಗ್ರಾಮಗಳು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುತ್ತಿದೆ. ಇದರಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕಳೆಂಜ, ಕುತ್ಲೂರು, ಮಲವಂತಿಗೆ, ನಡ, ನಾಲ್ಕೂರು, ನಾವೂರು, ನೆರಿಯ, ಪುದುವೆಟ್ಟು, ರೆಖ್ಯ, ಸವಣಾಲು, ನಾರಾವಿ, ಶಿಬಾಜೆ, ಶಿಶಿಲ, ಶಿರ್ಲಾಲು, ಸುಲ್ಕೇರಿಮೊಗ್ರು ಒಟ್ಟು 17 ಗ್ರಾಮಗಳು ಒಳಪಟ್ಟಿದ್ದು ಬಾಧಿತ ಗ್ರಾಮಗಳನ್ನು ವರದಿಯಿಂದ ಕೈಬಿಡಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ಶಾಂತಿಯುತ ಮೆರವಣಿಗೆ ಹಮ್ಮಿಕೊಂಡಿದೆ. ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ಹೊರಟ ಶಾಂತಿಯುತ ಮೆರವಣಿಗೆ ತಾಲೂಕು ಕಛೇರಿ ತಲುಪಿ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ ನೀಡಲಿದ್ದಾರೆ.

Related posts

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ನಿಡ್ಲೆ: ನೆಡಿಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ ; ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya
error: Content is protected !!