23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಈದ್ ಮಿಲಾದ್ ಸಂಭ್ರಮ: ಸವಣಾಲು ಬದ್ರಿಯಾ ಜುಮಾ ಮಸೀದಿಯಲ್ಲಿ ಮದರಸ ವಿದ್ಯಾರ್ಥಿಗಳ ವೈವಿಧ್ಯಮಯ ಕಾರ್ಯಕ್ರಮ

ಸವಣಾಲು: ಈದ್ ಮಿಲಾದ್ ಪ್ರಯುಕ್ತ ಆ. 24ರಂದು ಬದ್ರಿಯಾ ಜುಮಾ ಮಸೀದಿ ಸವಣಾಲು ಮತ್ತು ಹಿಮಾಯತುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳ ವೈವಿಧ್ಯಮಯ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸಿಕಂದರ್ ಪಾಷಾ ಆಗಮಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ, ಉತ್ತಮ ಉದ್ಯೋಗದ ಗುರಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಬದ್ರಿಯಾ ಜುಮಾ ಮಸೀದಿ, ಸವಣಾಲಿನ ಖತೀಬ್ ಉಸ್ತಾದ್ ರಿಯಾಝ್ ಸಹದಿ ಅವರು ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಗಳನ್ನು ಸುಸೂತ್ರವಾಗಿ ರೂಪಿಸಿ, ಕಾರ್ಯಕ್ರಮದ ಮುಂದಾಳುತ್ವ ವಹಿಸಿದ್ದರು. ತಮ್ಮ ಸಂದೇಶ ಭಾಷಣದಲ್ಲಿ ಜಮಾಅತ್‌ನ ಒಗ್ಗಟ್ಟು, ಸಮುದಾಯದ ಸಬಲೀಕರಣ, ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದ ಮಹತ್ವವನ್ನು ತಿಳಿಸಿದರು.

ಹಿಮಾಯತುಲ್ ಇಸ್ಲಾಂ ಮದರಸ, ಸವಣಾಲಿನ ಬೋಧಕ ಶಿಕ್ಷಕರಾದ ಉಮರುಲ್ ಫಾರೂಕ್ ಸಹದಿ ಅವರು ಮಕ್ಕಳ ವೈವಿಧ್ಯಮಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಜಮಾಅತ್ ಒಗ್ಗಟ್ಟು ಮತ್ತು ಸೌಹಾರ್ದತೆಯಿಂದ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಾದ ಅಗತ್ಯತೆಯನ್ನು ತಿಳಿಸಿದರು.

ಜಮಾಅತ್ ಉಪಾಧ್ಯಕ್ಷ ಡಿ. ರಫೀಕ್ ಅವರು ಕಾರ್ಯಕ್ರಮದ ಯಶಸ್ಸಿಗೆ ಪ್ರಮುಖ ಮುಂದಾಳುತ್ವ ಹಾಗೂ ನೇತೃತ್ವ ವಹಿಸಿದ್ದರು.

ಬದ್ರಿಯಾ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಎಂ. ಜಿ. ತಲ್ಹತ್ ಮಾಸ್ಟರ್ ಸವಣಾಲು ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿ ಮಾತನಾಡಿದರು. ಮದರಸ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣದ ಮಹತ್ವವನ್ನು ತಿಳಿಸಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವುದು ಹಾಗೂ ಉತ್ತಮ ನಾಗರಿಕರಾಗಿ ಬೆಳೆಯುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮದರಸ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಪ್ರತಿಭಾ ಪ್ರದರ್ಶನ ಕಾರ್ಯಕ್ರಮಗಳು ನಡೆದವು. ಈದ್ ಮಿಲಾದ್ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಯಶಸ್ಸಿಗೆ ಸವಣಾಲು ಹಾಗೂ ವಿವಿಧೆಡೆ ನೆಲೆಸಿರುವ ಹಿತೈಷಿಗಳು, ವಿದೇಶದಲ್ಲಿರುವ ಜಮಾಅತ್ ಸದಸ್ಯರು, ಆಡಳಿತ ಸಮಿತಿಯ ಸದಸ್ಯರು, ಜಮಾಅತ್‌ನ ಹಿರಿಯರು ಹಾಗೂ ಎಲ್ಲಾ ಸದಸ್ಯರು ಸಹಕರಿಸಿದರು.

ಎಸ್.ಎಸ್.ಎಫ್ ಸವಣಾಲು ಹಾಗೂ ಎಸ್.ಬಿ.ಎಸ್ ಸವಣಾಲು ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ವಿಶೇಷ ಸಹಕಾರ ನೀಡಿದರು.

Related posts

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!