34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಬಳಕೆಯ ಕುರಿತು ಸಂವಾದ

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ “Smart, Safe and Responsible Use of Technology” ಎಂಬ ವಿಷಯದ ಕುರಿತು ವಿಶೇಷ ಸಂವಾದ ಕಾರ್ಯಕ್ರಮವನ್ನು ಆ. 26ರಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ತಂತ್ರಜ್ಞಾನ, ಕಾರ್ಯಾಚರಣೆ ಮತ್ತು ಅಂಕಿ ಅಂಶಗಳ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಯಾದ ಡಾ. ರವೀಶ್ ಮಯ್ಯ ಭಾಗವಹಿಸಿದ್ದರು. ಅವರು ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಜಗತ್ತಿನಾದ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಕ್ಷೇತ್ರದ ವಿವಿಧ ಬೆಳವಣಿಗೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ, ಸುರಕ್ಷಿತವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸುವ ಅಗತ್ಯವನ್ನು ಉದಾಹರಣೆಗಳ ಮೂಲಕ ವಿವರಿಸಿದರು.

ಕಾರ್ಯಾಗಾರದಲ್ಲಿ ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

ತಂತ್ರಜ್ಞಾನದ ಸದುಪಯೋಗ, ಸುರಕ್ಷಿತ ಬಳಕೆ ಹಾಗೂ ಭವಿಷ್ಯದ ಅವಕಾಶಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ಕಾರ್ಯಕ್ರಮವು ಪರಿಣಾಮಕಾರಿಯಾಯಿತು.

Related posts

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ವಿ.ಪ. ಶಾಸಕ ಬಿ ಕೆ ಹರಿಪ್ರಸಾದ್ ರವರ ಭೇಟಿ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!