34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಸಾಹಿತ್ಯ ಸಂಭ್ರಮ”

ನಡ : “ವಿಶ್ವಸಂಸ್ಕೃತಿಯಲ್ಲಿ ಭಾರತ ಜಗದ್ಗುರುವಾಗಿದೆ. ವಿಶಿಷ್ಟವಾದ ಭಾರತೀಯ ಸಂಸ್ಕೃತಿಯಲ್ಲಿರುವ ಸಂಸ್ಕಾರ, ಆಚಾರ- ವಿಚಾರ, ರೀತಿ ನೀತಿಗಳನ್ನು ತಿಳಿದುಕೊಳ್ಳುವ ವೇದಿಕೆ ಈ ಸಾಹಿತ್ಯ ಸಂಭ್ರಮ. ಉಚಿತ ಹುಟ್ಟು ಮತ್ತು ಖಚಿತ ಸಾವಿನ ಮಧ್ಯೆ ನಮ್ಮ ಬದುಕು ಇದೆ. ಬೆಲೆಕಟ್ಟಲಾಗದ ಅಮೂಲ್ಯವಾದ ಈ ಬದುಕಿನಲ್ಲಿ ಏನನ್ನಾದರೂ ಸಾಧಿಸಿ ತೋರಿಸಬೇಕೆಂಬ ಛಲವಿರಬೇಕು.”ಎಂದು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಗುರುಗಳಾದ ಸೋಮಶೇಖರ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ “ಸಾಹಿತ್ಯ ಸಂಭ್ರಮ” ಸಮಾರಂಭದಲ್ಲಿ ಉದ್ಘಾಟಕರಾಗಿ ಮಾತನಾಡುತ್ತಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ.ವಿ. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ
ಚಂದ್ರಶೇಖರ್, ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಮೋಹನ ಗೌಡ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಅಜಿತ್ ಆರಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಪವಿತ್ರ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ. ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾಡಿ. ಧನ್ಯವಾದವಿತ್ತರು.


ಉಪನ್ಯಾಸಕರುಗಳಾದ ಕುಮಾರಿ ನಯನ ಮತ್ತು ಕುಮಾರಿ ಶ್ರಾವ್ಯ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಿದ್ಧಗೊಳಿಸಿದ ಸಮಾರಂಭದ ವೇದಿಕೆ ತುಂಬಾ ಆಕರ್ಷಕವಾಗಿತ್ತು. ಎಲ್ಲಾ ಉಪನ್ಯಾಸಕರು ಸಹಕರಿಸಿದ್ದರು.

Related posts

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಡಗಕಾರಂದೂರು ಶಾಲೆಯ ವಿದ್ಯಾರ್ಥಿನಿ ರಮ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!