26.5 C
ಪುತ್ತೂರು, ಬೆಳ್ತಂಗಡಿ
October 12, 2026
Uncategorized

ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ:: ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿ-ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಿವೃತ್ತ ಯೋಧರಾದ ಸುಬೇದಾ‌ರ್ ಮೇಜರ್ ಶಿವಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿ, ವಿದ್ಯಾರ್ಥಿಗಳು ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಶುಭ ಸಂದೇಶ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಜಮೀ‌ರ್ ಸಹದಿ ಅವರು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಮಸ್ತ ವಿದ್ಯಾಭಿಮಾನಿಗಳಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾ‌ರ್, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳ ಹೆತ್ತವರು ಹಾಗೂ ಪೋಷಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಪಿ ಶಿವಾನಂದ ಭಂಡಾರಿ ಅವರು ಸರ್ವರನ್ನು ಸ್ವಾಗತಿಸಿ, ಹಿರಿಯ ಶಿಕ್ಷಕರಾದ ದಿನಕರ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕರಾದ ರಾಜೇಶ್ ರವರು ಧನ್ಯಾವಾದವಿತ್ತರು.ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದವು. ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನವು ನೆರೆದಿದ್ದವರ ಮೆಚ್ಚುಗೆಗೆ ಪಾತ್ರವಾಯಿತು. ನಮ್ಮ ಶಾಲೆಯ ಮಕ್ಕಳನ್ನು ಮಾತಾಡುವ ದೇವರೇ ಎಂದು ನಂಬಿದ ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯ ಇವರನ್ನು ಗೌರವದಿಂದ ಸನ್ಮಾನಿಸಲಾಯಿತು. ಮತ್ತು ನಮ್ಮ ಶಾಲೆಯ ಹಿರಿಯ ನಿವೃತ್ತ ಮುಖ್ಯಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯ ಇವರನ್ನು ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು. ಒಟ್ಟಾರೆಯಾಗಿ,ದೇಶಭಕ್ತಿ, ಸೌಹಾರ್ದತೆ ಹಾಗೂ ರಾಷ್ಟ್ರಾಭಿಮಾನವನ್ನು ಸಾರುವ ಮೂಲಕ ನೆರವೇರಿತು

Related posts

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!