23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.29-31: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಆ.29 ರಿಂದ 31 ರವರೆಗೆ 355ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಅಧ್ಯಕ್ಷ, ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ತಿಳಿಸಿದ್ದಾರೆ.

ಆ.29ರಂದು ಬೆನಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಗೋಪಾಲಕೃಷ್ಣ ಭಟ್, ಡಾ. ಭಾರತಿ ದಂಪತಿ ದೀಪ ಪ್ರಜ್ವಲನೆ ಮಾಡಲಿರುವರು. ನಂತರ ವಿವಿಧ ಭಜನಾ ಮಂಡಳಿಗಳಿAದ ಭಜನಾ ಕಾರ್ಯಕ್ರಮಗಳು ನಡೆಯಲಿದೆ.


ಆ.30ರಂದು ಬೆಳಿಗ್ಗೆ ಭಜನೆ, ಸಾಕ್ಸೋಫೋನ್ ವಾದನ, ಭಕ್ತಿ ರಸಮಂಜರಿ ನಡೆಯಲಿದೆ. 11.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಪ್ರತಿಷ್ಠಾನದ ಅಧ್ಯಕ್ಷ ಬಿ. ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು, ಉದ್ಯಮಿಗಳಾದ ಶಶಿಧರ ಶೆಟ್ಟಿ ನವಶಕ್ತಿ, ಮಂಜುನಾಥ ಕನ್ಯಾಡಿ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ, ಚಿಕ್ಕಬಳ್ಳಾಪುರ ನಾಗನಾಥೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು, ಸುಶೀಲ ಪ್ರಿಯದರ್ಶಿನಿ ಭಾಗವಹಿಸಲಿದ್ದಾರೆ.

ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ್ ಬಿ. ರವರಿಗೆ ಗೌರವಾರ್ಪಣೆ ಹಾಗೂ ಎಸ್.ಎಸ್.ಎಲ್.ಸಿ ಪಿಯುಸಿ ಪರೀಕ್ಷೆಯಲ್ಲಿ ಅತೀಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಭಜನಾ ಕಾರ್ಯಕ್ರಮ, ಭಕ್ತಿ ರಸಮಂಜರಿ ಜರುಗಲಿದೆ ಎಂದು ಅವರು ತಿಳಿಸಿದರು.

Related posts

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya
error: Content is protected !!