24.8 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸಹಕಾರಿಯಿಂದ ಸಮೃದ್ಧಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಎಂಬ ಸದುದ್ದೇಶದೊಂದಿಗೆ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಕಚ್ಚಾರಸ್ತೆಗಳ ದುರಸ್ತಿ ಕಾರ್ಯ ಕೈಗೊಂಡಿದೆ.

ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಪಾರೆಂಕಿ, ಕುಕ್ಕಳ, ಸೋಣಂದೂರು ಹಾಗೂ ಮಾಲಾಡಿ ವ್ಯಾಪ್ತಿಯಲ್ಲಿ ಬರುವ ಕಚ್ಚಾರಸ್ತೆಗಳನ್ನು ದುರಸ್ತಿ ಮಾಡಲಾಯಿತು. ಮಳೆಗಾಲದಲ್ಲಿ ಹದಗೆಟ್ಟಿದ್ದ ರಸ್ತೆಗಳ ದುರಸ್ತಿಯಿಂದ ಗ್ರಾಮಸ್ಥರು, ರೈತರು ಹಾಗೂ ವಾಹನ ಸವಾರರಿಗೆ ಸಂಚಾರಕ್ಕೆ ಅನುಕೂಲವಾಗಿದೆ.

ಸಹಕಾರಿ ಸಂಘಗಳು ಕೇವಲ ಸಾಲ-ವ್ಯವಹಾರಗಳಿಗೆ ಸೀಮಿತವಾಗದೆ, ಗ್ರಾಮೀಣ ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲೂ ಕೈಜೋಡಿಸಬಹುದು ಎಂಬುದಕ್ಕೆ ಮಡಂತ್ಯಾರು ಸೊಸೈಟಿಯ ಈ ಕಾರ್ಯ ಮಾದರಿಯಾಗಿದೆ. ಸಂಘದ ವತಿಯಿಂದ ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ, ಉಪಾಧ್ಯಕ್ಷ ಕಾಂತಪ್ಪ ಗೌಡ, ನಿರ್ದೇಶಕರಾದ ಕೆ. ಅರವಿಂದ ಜೈನ್, ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೋ, ಸುರೇಶ್ ಎಸ್., ಶಶಿಪ್ರಭಾ, ಮಹಾಬಲ ಕೆ., ಗಣೇಶ್ ಮೂಲ್ಯ, ಗೋಪಾಲಕೃಷ್ಣ ಕೆ., ಕಿಶೋರ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲಿಯಾನ್ ಹಾಗೂ ಸಿಇಒ ಜೋಕೀ ಡಿಸೋಜಾ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya
error: Content is protected !!