August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

ಬೆಳ್ತಂಗಡಿ: ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆಯನ್ನು ಆ. 27ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರದ ಕುರಿತು ವಿವರಿಸಿದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ಬಿಳಿನೆಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ಹಾಗೂ ಭವಿಷ್ಯದ ರೂಪಿಸುವಿಕೆಯಲ್ಲಿ ಹೊಂದಬೇಕಾದ ಸಮನ್ವಯದ ಕುರಿತು ಮಾರ್ಗದರ್ಶಕ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಪೋಷಕರು ಮತ್ತು ಶಿಕ್ಷಕರ ನಿರಂತರ ಸಂವಹನ ಹಾಗೂ ಸಹಕಾರ ಅತ್ಯಂತ ಅಗತ್ಯ. ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಅವರ ಪ್ರತಿಭೆ, ಶಿಸ್ತು, ಮೌಲ್ಯಗಳು ಮತ್ತು ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ಪೋಷಕರು ಹಾಗೂ ಶಿಕ್ಷಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.

ಸಭೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಪರಸ್ಪರ ಚರ್ಚಿಸಿದರು. ಪೋಷಕರು–ಶಿಕ್ಷಕರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಮೂಲಕ ಸಭೆಯು ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮಕ್ಕೆ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಿನಯ ಭೀಡೆ ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಕುಮಾರಿ ದೀಪಿಕಾ ವಂದಿಸಿದರು. ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ಕಿಶೋರಿ ಎಸ್. ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya
error: Content is protected !!