23.5 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ :”ಸಂಸ್ಕೃತವನ್ನು ಕಲಿತು ಸುಸಂಸ್ಕೃತರಾಗಿ, ಆಧುನಿಕ ಮೋಹಕೊಳಗಾಗಿ ಸಂಸ್ಕೃತವನ್ನು ನಿರ್ಲಕ್ಷಿಸದೆ ಅಧ್ಯಯನ ಮಾಡಿ. ಸಂಸ್ಕೃತವನ್ನು ಮಾತಾಡುವ, ಸಂಸ್ಕೃತವನ್ನು ಇಡುವ, ಸಂಸ್ಕೃತವನ್ನು ರಕ್ಷಿಸುವ ಹಾಗೂ ವರ್ಧಿಸುವ” ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಸಂಸ್ಕೃತ ಅಧ್ಯಾಪಕ ಹರೀಶ್ ಕುಮಾರ್.ಎಂ ಇವರು ಹೇಳಿದರು.

ಇವರು ಆ.28 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಸಂಸ್ಕೃತ ಜಯ ಘೋಷಣೆಗಳ ಮೆರವಣಿಗೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪಂಚಾಂಗ ವಾಚನ, ಸುಭಾಷಿತ, ಸಮೂಹ ಗಾಯನ ಹಾಗೂ ವಿಶ್ವ ಸಂಸ್ಕೃತ ದಿನದ ಮಹತ್ವದ ಕುರಿತು ಭಾಷಣ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಸಿದ್ಧಾಂತ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಜನಾ ವಾಲ್ತಾಜೆ ಸ್ವಾಗತಿಸಿ, ವಿದ್ಯಾರ್ಥಿ ಅತುಲ್ಯ ತೇಜ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!