33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಲೆಯ ಭಾಗಕ್ಕೆ ಹಾಗೂ ಎದೆಗೆ ತೀವ್ರ ಏಟಾಗಿದ್ದ ಪರಿಣಾಮ 8 ದಿನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಓರ್ವ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya
error: Content is protected !!