27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ , ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಮಾಜದ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಹಾಗೂ 13 ಲಕ್ಷ ವಿದ್ಯಾರ್ಥಿವೇತನ ವಿತರಣೆ ಸಮಾರಂಭವು ಆ. 28, ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ವಹಿಸಿದ್ದರು.

ಕಾರ್ಯಕ್ರಮವನ್ನು ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ದೀಕ್ಷಿತಾ, ವಿಜಯ್ ಪಿ. ಪೂಜಾರಿ ಗ್ರೂಪ್ ಆಫ್ ಹೋಟೇಲ್ ಪಂಜುರ್ಲಿ ಹುಬ್ಬಳ್ಳಿ, ಸಂಘದ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಪೀತಾಂಬರ ಹೇರಾಜೆ, ಭಗೀರಥ ಜಿ, ಜಯರಾಮ್ ಬಂಗೇರ, ಚಿದಾನಂದ ಪೂಜಾರಿ ಎಲ್ದಕ್ಕ, ಗಂಗಾಧರ ಮಿತ್ತಮಾರು, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ ಉಪಸ್ಥಿತರಿದ್ದರು. ಗುರು ಸಂದೇಶವನ್ನು ನಿತೇಶ್ ಪೂಜಾರಿ ಮಾರ್ನಾಡ್ ಅವರು ನೀಡಿದರು.

ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ : ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟ, ಜಿಲ್ಲಾ ಮಟ್ಟ, ತಾಲೂಕು ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಸನ್ಮಾನ ಹಾಗೂ ಗೌರವಾರ್ಪಣೆ ನಡೆಯಿತು. ಪ್ರತಿಭಾವಂತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು 13 ಲಕ್ಷ ವಿದ್ಯಾರ್ಥಿವೇತನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ ಬೆಳ್ತಂಗಡಿ, ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್, ಮಹಿಳಾ ವೇದಿಕೆ ಅಧ್ಯಕ್ಷೆ ಸಮತಿ ಪ್ರಮೋದ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ.ಕೆ ಪ್ರಸಾದ್, ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ಗುಂಡೂರಿ, ಸಂಜೀವ ಪೂಜಾರಿ ಕೊಡಂಗೆ, ಜಯಕುಮಾರ್ ನಡ, ನಾರಾಯಣ ಉಚ್ಚೂರು, ರವೀಂದ್ರ ಬಿ. ಅಮೀನ್, ಚಂದ್ರಶೇಖರ ಇಂದಬೆಟ್ಟು, ಸಂತೋಷ್ ಕೆ.ಸಿ., ಸುನಿಲ್ ಕನ್ಯಾಡಿ, ಗುರುರಾಜ್, ರೂಪೇಶ್ ಕೆ ಧರ್ಮಸ್ಥಳ, ಅನೂಪ್ ಬಂಗೇರ, ಕರುಣಾಕರ, ವಿನೋದಿನಿ, ಪ್ರಮೋದ್ ಕುಮಾರ್, ರಾಜಶ್ರೀ ರಮಣ್, ಉಷಾ ಕಿರಣ್, ನಮಿತಾ, ಗುಣಾಕರ, ಹರಿದಾಸ್ ಕೇದೆ, ಕಮಲಾಕ್ಷ ಬೆಳ್ತಂಗಡಿ ಉಪಸ್ಥಿತರಿದ್ದರು.

ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು ಪ್ರಾರ್ಥನೆಗೈದರು,ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ ಸ್ವಾಗತಿಸಿದರು.ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು.

Related posts

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!