33.4 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ‘ಭಾರತ್ ಜೋಡೋ ಸಂಘ’ಗಳ ಸ್ಥಾಪನೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಗಳ ರಚನೆ ಮತ್ತು ಸಮನ್ವಯದ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರಿಗೆ ವಹಿಸಲಾಗಿದೆ.

ಪಂಚಾಯತ್ ರಾಜ್ ಸಂಘಟನೆಯಲ್ಲಿ ಅವರು ತೋರಿದ ಸಕ್ರಿಯ ನಾಯಕತ್ವ, ಸಂಘಟನಾ ಸಾಮರ್ಥ್ಯ, ನಿರಂತರ ಜನಸಂಪರ್ಕ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವಲ್ಲಿ ವಹಿಸಿದ ಪ್ರಮುಖ ಪಾತ್ರವನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ.

ಯುವಜನರನ್ನು ಸಂಘಟಿಸುವುದು, ಅವರಲ್ಲಿ ಸೌಹಾರ್ದತೆ, ಸಹೋದರತ್ವ, ಸಾಮಾಜಿಕ ಸಾಮರಸ್ಯ ಹಾಗೂ ನಾಯಕತ್ವದ ಮನೋಭಾವವನ್ನು ಬೆಳೆಸುವುದು ಮತ್ತು ಗ್ರಾಮೀಣ ಭಾಗದಿಂದಲೇ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಅನುಭವ ಪರಿಣಾಮಕಾರಿಯಾಗಲಿದೆ ಎಂದು ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಯೋಜಕರನ್ನಾಗಿ ನೇಮಿಸಿ, ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯ ಸದಸ್ಯರಾಗಿ ಮುಡಿಪು ಬ್ಲಾಕ್ ಶ್ರೀಮತಿ ವೃಂದಾ ಪೂಜಾರಿ, ಬೆಳ್ತಂಗಡಿ ಅಬ್ದುಲ್ ರಜಾಕ್, ಮುಲ್ಕಿ ಬ್ಲಾಕ್ ಬೋಳ ಸರ್ಫರಾಜ್, ಪುತ್ತೂರು ಸಂತೋಷ್ ಭಂಡಾರಿ, ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಪರಿಸರ ದಿನ ಆಚರಣೆ: ಗಿಡ ನೆಟ್ಟ ಪ್ರಥಮ ಪಿಯು ವಿದ್ಯಾರ್ಥಿಗಳು

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!