27.8 C
ಪುತ್ತೂರು, ಬೆಳ್ತಂಗಡಿ
October 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ ಪುತ್ರ ಶಾಲಾ ವಿದ್ಯಾರ್ಥಿ ಸುಮಂತ್ (14) ಎಂಬಾತ 14-01-2026 ರಂದು ಬೆಳಗ್ಗಿನ ಜಾವ ಕಳಿಯ ಗ್ರಾಮದ ಮನೆಯ ಹತ್ತಿರದ ಮನೆಯ ತೋಟದ ಕೆರೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ಬೆಳ್ತಂಗಡಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಪ್ರಕ್ರಿಯೆ ನಡೆಸಿ ಮುಕ್ತಾಯ ಮಾಡಲಾಗಿದೆ.

ಬೆಂಗಳೂರಿನ ಮಾಡಿವಾಳ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮೃತ ಸುಮಂತ್ ಸಹೋದರ ಸುದರ್ಶನ್ ಅವರನ್ನು ಆ.28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆ ತನಕ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಲಾಗಿದೆ.ನಾಳೆ ಕೂಡ ಈ ಪ್ರಕ್ರಿಯೆ ಮುಂದುವರಿಯಲಿದ್ದು ಮಾವ ರಾಧಕೃಷ್ಣರ ಬಳಿಕ ಮತ್ತೊಬ್ಬ ಮಾವ ಲಕ್ಷ್ಮೀ ನಾರಾಯಣ ಅವರ ಮಂಪರು ಪರೀಕ್ಷೆ ನಡೆಯಲಿರುವುದು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದಲ್ಲಿ ಆ.28 ರಂದು ಕರೆದುಕೊಂಡು ಹೋಗಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಎರಡನೇ ಗಂಭೀರ ಪ್ರಕರಣದ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಮೊದಲು ಕುಟುಂಬದ ಐವರನ್ನು ಬೆಂಗಳೂರಿಗೆ ಕರೆದೊಯ್ದು ಮೊದಲ ಹಂತದ ತನಿಖೆ ನಡೆಸಲಾಗಿತ್ತು. ಆ.10 ರಂದು ಸುಮಂತ್ ತಂದೆ ಸುಬ್ರಹ್ಮಣ್ಯ ನಾಯಕ್ ಹಾಗೂ ತಾಯಿ ರತ್ನಾವತಿಯವರನ್ನು ಮಧ್ಯಾಹ್ನದಿಂದ ಸಂಜೆಯವರೆಗೆ ಪ್ರಶ್ನಿಸಲಾಗಿತ್ತು.ಆ.11 ರಂದು ರತ್ನಾವತಿ ಸಹೋದರ ರಾಧಾಕೃಷ್ಣ ಹಾಗೂ ಸಂಬಂಧಿ ಲಕ್ಷ್ಮೀನಾರಾಯಣ ಮಗ ಸುದರ್ಶನ್ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು.

ಈ ಐವರಿಂದ ಪಡೆದ ಉತ್ತರಗಳು ಹಾಗೂ ತನಿಖೆ ವೇಳೆ ದಾಖಲಾದ ಮಾಹಿತಿಯನ್ನು ತಾಳೆಹಾಕಿ ಪರಿಶೀಲಿಸುವ ಕಾರ್ಯವನ್ನು ತಜ್ಞರು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಗುರುತಿಸಲಾಗಿರುವ ಇತರ ಶಂಕಿತರನ್ನೂ ಮುಂದಿನ ದಿನಗಳಲ್ಲಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೊಳಪಡಿಸಲು ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ನಡೆಸಿಕೊಂಡಿದೆ.

Related posts

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಶಿಕ್ಷಕರ ದಿನಾಚರಣೆ

Suddi Udaya
error: Content is protected !!