27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಆ.27 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಡು, ನೃತ್ಯ ಮತ್ತು ದಫ್ ಮೂಲಕ ಮನರಂಜಿಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ | ಸ್ಟ್ಯಾನಿ ಗೋವಿಯಸ್ ರವರು ವಹಿಸಿ ಮಾತನಾಡಿ, “ಪ್ರತಿಯೊಂದು ಧರ್ಮವೂ ಬೋಧಿಸುವ ಮೌಲ್ಯಗಳನ್ನು ಗೌರವಿಸಿ. ಸಮಾಜದಲ್ಲಿ ಒಳ್ಳೆಯ ಮಾನವರಾಗಿ ಬಾಳಿ.” ಎಂದು ಹೇಳಿ ಈದ್ ಮಿಲಾದ್ ಶುಭಾಶಯವನ್ನು ಕೋರಿದರು.

ಮುಖ್ಯ ಅತಿಥಿಗಳಾಗಿ ಯೆನೆಪೋಯ ಕಾಲೇಜಿನ ಪ್ರೊ |ಡಾ| ನಿಯಾಝ್ ಪಣಕಜೆ ರವರು ಆಗಮಿಸಿ ಪ್ರೀತಿ, ಕ್ಷಮೆ, ಶಾಂತಿ, ದಾನಧರ್ಮ ಮತ್ತು ಶಿಸ್ತು ಇವು ಯಾವುದೇ ಒಂದು ಧರ್ಮಕ್ಕೆ ಸೀಮಿತವಾದ ಮೌಲ್ಯಗಳಲ್ಲ. ಇವು ಪ್ರತಿಯೊಬ್ಬ ಒಳ್ಳೆಯ ಮನುಷ್ಯನ ಜೀವನದ ಆಧಾರವಾಗಿವೆ. ವಿವಿಧ ಧರ್ಮಗಳು ನಮಗೆ ಕಲಿಸುವ ಉತ್ತಮ ಮೌಲ್ಯಗಳನ್ನು ಗೌರವಿಸಿ, ಒಳ್ಳೆಯ ಮನುಷ್ಯರಾಗಿ ಸಮಾಜದಲ್ಲಿ ಬದುಕುವುದು ನಮ್ಮ ಕರ್ತವ್ಯ. ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯರಾದ ವಂ| ಸ್ವಾ| ದೀಪಕ್ ಲಿಯೋ ಡೇಸ, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ನೆಲ್ಸನ್ ಲಸ್ರಾದೋ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಯೋಜಕರಾದ ಲಿಯೋ ನೋರೊನ್ಹಾ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಪ್ರವೀಣ್ ಚಂದ್ರಶೆಟ್ಟಿ , ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅನ್ನ ಅಭಿಗೆಲ್ ಪಿಂಟೋ ಮತ್ತು ಪ್ರತಮ್ ಶೆಟ್ಟಿ ನಿರೂಪಿಸಿ, ಗ್ಲ್ಯಾನ್ಸನ್ ವೇಗಸ್ ಸ್ವಾಗತಿಸಿ, ಸೋನಾಲ್ ಡಿಸೋಜ ಧನ್ಯವಾದವನ್ನು ಸಮರ್ಪಿಸಿದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya
error: Content is protected !!