25.2 C
ಪುತ್ತೂರು, ಬೆಳ್ತಂಗಡಿ
October 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರು-ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ೨೦೨೬-೨೮ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.೩೦ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ.

ಉಡುಪಿ ಅಲ್ಲಮಪ್ರಭು ಅನುಭಾವ ಪೀಠದ ಪೀಠಾಧಿಪತಿ ಶರಣ ಜಗನ್ನಾಥಪ್ಪ ಪನಸಾಲೆ ದೀಪ ಪ್ರಜ್ವಲನೆಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಪಂಚಾಕ್ಷರಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಮಗಳೂರು ನಿವೃತ್ತ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹೆಚ್.ಎಮ್., ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸಪ್ಪ ರೊಟ್ಟಿ ಉಪಸ್ಥಿತರಿರುವರು. ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಕಾರ್ಯದರ್ಶಿ ಕಲ್ಲೇಶಪ್ಪ ಕೆ.ಬಿ. ಉಪಸ್ಥಿತರಿರುವರು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ಪ್ರಕಾಶ್, ಉಪಾಧ್ಯಕ್ಷರಾಗಿ ಗಾಯತ್ರಿ ವಿಶ್ವನಾಥ ಲಿಂಗಾಯತ ಉಜಿರೆ, ವಿಠಲ ಲಿಂಗಾಯತ ಪುದ್ದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಸೌಮ್ಯ ವಸಂತ್ ಬಟ್ಟಾಜೆ ಕಲ್ಮಂಜ, ಜೊತೆ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಕೋಶಾಧಿüಕಾರಿಯಾಗಿ ರಮೇಶ್ ಜಾಮೇಗೌಡ, ಸಹ ಕೋಶಾಧಿಕಾರಿಯಾಗಿ ಚನ್ನಯ್ಯ ಕೊಡಗಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಗಳು, ಗೌರವ ಸಲಹೆಗಾರರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya
error: Content is protected !!