27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿ

ಉಜಿರೆ: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ಸ್ಪರ್ಧಾ ಮನೋಭಾವ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ಹಾಗೂ ಐಕ್ಸ್ (AICS) ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ‘ಎಸ್.ಡಿ.ಎಂ. ಫ್ಲೈ ಹೈ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್’ಗೆ ಚಾಲನೆ ನೀಡಲಾಯಿತು.

ಉಜಿರೆಯ ಎಸ್.ಡಿ.ಎಂ. ಪದವಿ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ಆ. 28 ರಂದು ನಡೆದ ಪಂದ್ಯಾವಳಿಯ ಉದ್ಘಾಟನೆಯನ್ನು ಉಜಿರೆ ಎಸ್.ಡಿ.ಎಂ.ಇ. ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಇವರು ನೆರವೇರಿಸಿ, ಕ್ರೀಡಾಪಟುಗಳಿಗೆ ಶುಭಹಾರೈಸಿದರು.

ಇಂದು ನಡೆದ ಅಂಡರ್-14 ವಯೋಮಾನದ ಜೂನಿಯರ್ ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲೆಗಳ ಒಟ್ಟು 40 ತಂಡಗಳು ಉತ್ಸಾಹದಿಂದ ಭಾಗವಹಿಸಿದವು. ಕ್ರೀಡಾಪಟುಗಳು ಉತ್ತಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಪಂದ್ಯಾವಳಿಗೆ ಮೆರುಗು ತಂದರು.

ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ಕ್ರೀಡಾ ಸ್ಫೂರ್ತಿ ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ‘Smash Your Limits, Fly High!’ ಎಂಬ ಆಶಯದೊಂದಿಗೆ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್ ವಿದ್ಯಾರ್ಥಿಗಳಿಗೆ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಶಾಲೆಯ ಕ್ರೀಡಾ ಶಿಕ್ಷಣ ಶಿಕ್ಷಕ ಶ್ರೀ ಸಂತೋಷ್ ಹಾಗೂ ಶಿಕ್ಷಕಿ ಶ್ರೀಮತಿ ಪೌಲಿನ್ ಸಂಯೋಜಿಸಿ, ಶಿಕ್ಷಕಿ ಶ್ರೀಮತಿ ನೀತು ಪ್ರಸಾದ್ ನಿರೂಪಿಸಿದರು.

Related posts

ವಿದ್ವತ್ ವಿಝ್ ವರ್ಲ್ಡ್ ಕಾರ್ಯಕ್ರಮ: ಸಂವಹನ ಕೌಶಲ್ಯದಿಂದ ಆತ್ಮವಿಶ್ವಾಸ ದ್ವಿಗುಣ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!