26.3 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ: ರಕ್ಷಾಬಂಧನ ಹಬ್ಬದ ಅಂಗವಾಗಿ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ.)ಯಲ್ಲಿ ವಿದ್ಯಾರ್ಥಿಗಳಿಂದ ಸಂಭ್ರಮದಿಂದ ರಕ್ಷಾಬಂಧನ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಕ್ಷಾಬಂಧನ ಹಬ್ಬದ ಮಹತ್ವ ಹಾಗೂ ಅಣ್ಣ-ತಂಗಿಯರ ಪವಿತ್ರ ಬಾಂಧವ್ಯದ ಕುರಿತು ಮಾತನಾಡಿದರು. ಬಳಿಕ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ಪರಸ್ಪರ ಸಹಪಾಠಿಗಳಿಗೆ ಹಾಗೂ ಸಹೋದರರಿಗೆ ರಕ್ಷೆಯನ್ನು ಕಟ್ಟಿ, ಸಿಹಿ ಹಂಚಿಕೊಳ್ಳುವ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿನಿಯರಾದ ಧನ್ವಿ ಹಾಗೂ ಅನ್ವಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya
error: Content is protected !!