27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನ್ಯಾಯಲಯದ ಸಿಬ್ಬಂದಿ ಪ್ರದೀಪ್ ಡಿ.ಎಸ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕಳೆದ ಎರಡು ವರ್ಷದಿಂದ ನ್ಯಾಯಲಯದಲ್ಲಿ ಜವಾನನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಡಿ.ಎಸ್ (45) ಅವರು ಆ.26 ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಆ.26 ರಂದು ತಮ್ಮ ಸ್ವಂತ ಊರಾದ ಶಿವಮೊಗ್ಗಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ನಾರಾವಿ ಸಮೀಪ ಹೃದಯಾಘಾತಕ್ಕೊಳಗಾಗಿದ್ದರು. ಕೂಡಲೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯವರು. ಮೃತರ ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!