26.3 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭಿಸಲಾದ ಎಸ್ ಮಾರ್ಟ್‌ನ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಸೊಸೈಟಿಯ ನೂತನ ಭದ್ರತಾ ಕೊಠಡಿಯನ್ನು ಪಡಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಪಡಂಗಡಿ–ಗರ್ಡಾಡಿ ಭಾಗದ ಅಭಿವೃದ್ಧಿಗೆ ಪೂರ್ಣ ಪ್ರಮಾಣದಲ್ಲಿ ಪ್ರಯತ್ನಿಸಲಾಗುವುದು. ಸಹಕಾರಿ ಸಂಘಗಳು ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಪ್ರಮುಖ ಅಂಗವಾಗಿದ್ದು, ಜನರಿಗೆ ಅಗತ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನಿಟ್ಟಿನಲ್ಲಿ ಪಡಂಗಡಿ ಸೊಸೈಟಿ ಕೈಗೊಂಡಿರುವ ಎಸ್ ಮಾರ್ಟ್ ಯೋಜನೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್, ಉಪಾಧ್ಯಕ್ಷ ನರೇಂದ್ರ ಕುಮಾರ್, ಸಿಇಒ ಸುಕೇಶಿನಿ, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ., ರಾಮು, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ, ಉಮೇಶ್, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸುದರ್ಶನ್, ಸೊಸೈಟಿ ಲೆಕ್ಕಿಗ ಸುಜಯ, ಸಿಬ್ಬಂದಿಗಳಾದ ಉಮೇಶ್, ಆನಂದ, ರಂಜಿತ್ ಸೇರಿದಂತೆ ಸೊಸೈಟಿ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya
error: Content is protected !!