27.8 C
ಪುತ್ತೂರು, ಬೆಳ್ತಂಗಡಿ
October 15, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಸರ್ಕಾರಿ ಪ್ರೌಢಶಾಲೆ, ಕೊಕ್ರಾಡಿ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

17ರ ವಯೋಮಾನದ ಆರ್ಟಿಸ್ಟಿಕ್ ಯೋಗ ವಿಭಾಗದಲ್ಲಿ ಶಾಲೆಯ ವಿದ್ಯಾರ್ಥಿ ಧನುಷ್ ಆರ್. ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇದೇ ವಿಭಾಗದ ಟ್ರೆಡಿಶನಲ್ ಯೋಗ ವೈಯಕ್ತಿಕದಲ್ಲಿ ಧನುಷ್ ಆರ್. ಶೆಟ್ಟಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಅದೇ ರೀತಿ ನಿಶಾಂತ್ ಮತ್ತು ಧನುಷ್ ರೈ 17ರ ವಯೋಮಾನದವಿಭಾಗದಲ್ಲಿ ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. 14ರ ವಯೋಮಾನದ ಟ್ರೆಡಿಶನಲ್ ಯೋಗ ವಿಭಾಗದಲ್ಲಿ ಮನ್ವಿತ್ ಮತ್ತು ಶ್ರವಂತ್ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಹೇಮೋದರ್ ಅವರು ತರಬೇತಿ ನೀಡಿದ್ದರು.

ವಿದ್ಯಾರ್ಥಿಗಳ ಶ್ರಮ, ತರಬೇತಿ ಹಾಗೂ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ: ಕುಣಿತ‌ ಭಜನಾ ತರಬೇತುದಾರರ ‌ತಂಡದ‌ “ಭಜೋರೆ‌ ಮಾರುತಿ‌” ನೂತನ‌‌ ಲಾಂಚನ ಬಿಡುಗಡೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya
error: Content is protected !!