27.8 C
ಪುತ್ತೂರು, ಬೆಳ್ತಂಗಡಿ
October 15, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ಕೊಕ್ಕಡ ವಲಯದ ಸಹಭಾಗಿತ್ವದಲ್ಲಿ ಉಜಿರೆಯ ಎಸ್.ಡಿ.ಎಂ. ಸೆಕೆಂಡರಿ ಶಾಲೆಯ ಕ್ರೀಡಾಂಗಣದಲ್ಲಿ ನಡೆದ 17ರ ವಯೋಮಾನದ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ಬಾಲಕರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ಶಾಲೆಯ ಬಾಲಕರ ತಂಡವು ಕ್ರೀಡಾಕೂಟದಲ್ಲಿ ಉತ್ತಮ ಕ್ರೀಡಾಸ್ಫೂರ್ತಿ ಹಾಗೂ ಸಂಘಟಿತ ಆಟದ ಮೂಲಕ ಗಮನ ಸೆಳೆದು ಮುಂದಿನ ಹಂತಕ್ಕೆ ಅರ್ಹತೆ ಗಳಿಸಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಹೇಮೋದರ್ ಅವರು ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದರು.

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!