33.4 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿಯ ಆಚರಣೆ ಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಹಾಗೂ ಮಾತೃಶ್ರೀ ಸತ್ಸಂಗ ಭಜನಾ ಮಂಡಳಿ ದೇವಿನಗರ, ಪಚ್ಚನಾಡಿ ಇಲ್ಲಿಯ ಸದಸ್ಯರು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀಯುತ ಮನೋಜ್ ಶಾಂತಿ ಇವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.

ಗುರುವಂದನಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರು ಹಾಗೂ ಗುರು ಶ್ರೇಷ್ಠರಾದ ಶ್ರೀ ಮಾಧವ ಸುವರ್ಣ ಯು. ಇವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.

ಈ ಶುಭ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ , ನಿರ್ದೇಶಕರುಗಳಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್ ಕೊಂಡಾಣ, ರಮಾನಾಥ್ ಸನಿಲ್, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವಧ್ಯಕ್ಷ ವಾಮನ್ ಕೆ ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..

Related posts

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya
error: Content is protected !!