32.5 C
ಪುತ್ತೂರು, ಬೆಳ್ತಂಗಡಿ
October 15, 2026
ಆಯ್ಕೆಕ್ರೀಡಾ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಚೆಸ್ ಸ್ಪರ್ಧೆ: ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಮನ್ ಸಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು ದಕ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿ ಯೊಳಗಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಚೆಸ್ ಪಂದ್ಯಾಟ ವನ್ನು ಆ.28ರಂದು ಇಂದ್ರ ಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆಸಲಾಯಿತು.

ಎಲ್. ಸಿ.ಆರ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿ ನಮನ್ ಸಿ. ಶೆಟ್ಟಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿ ತೃತೀಯ ಸ್ಥಾನ ಗಳಿಸಿ ಕೊಪ್ಪಳದಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ತರಬೇತಿಯನ್ನು ನೀಡಿರುತ್ತಾರೆ.

ಇವರು ಎಂ ಚಂದ್ರಹಾಸ ಶೆಟ್ಟಿ ಮತ್ತು ವಿನಯ ರೈ ದಂಪತಿ ಪುತ್ರ, ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲ ಜೋಸ್ಟನ್ ಲೋಬೋ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ವಿಜಯ ಕೆ ಅಭಿನಂದಿಸಿದ್ದಾರೆ .

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
error: Content is protected !!