32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ಘೋಷಣೆ

ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29ರಂದು ಸಂಘದ ಅಧ್ಯಕ್ಷ ಧನಂಜಯ ಗೌಡ ಅವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ 2025–26ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪತ್ರಗಳು ಹಾಗೂ ಸಂಘದ ವಿವಿಧ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಸಂಘವು ಪ್ರಸಕ್ತ ಸಾಲಿನಲ್ಲಿ ₹99 ಲಕ್ಷಕ್ಕೂ ಹೆಚ್ಚಿನ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಧನಂಜಯ ಗೌಡ ತಿಳಿಸಿದರು.

ಈ ಸಂದರ್ಭದಲ್ಲಿ ಸದಸ್ಯರ ಹಿತಾಸಕ್ತಿ ಹಾಗೂ ಸಂಘದ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ವಿಚಾರ ವಿನಿಮಯ ನಡೆಯಿತು. ಈ ಹಿಂದಿನ ಸಂಘದ ವಾರ್ಷಿಕ ಸಭೆಯಲ್ಲಿ ಪ್ರಸ್ತಾಪ ಗೊಂಡಂತೆ ಸಂಘದ ಸದಸ್ಯರು ಮರಣ ಹೊಂದಿದ ಸಂದರ್ಭದಲ್ಲಿ ಅವರ ಸಾಲವನ್ನು ಮನ್ನಾ ಮಾಡುವ ಉದ್ದೇಶದಿಂದ, ಸಂಘದ ವ್ಯಾಪ್ತಿಯಲ್ಲಿರುವ ಸದಸ್ಯರ ಪ್ರತಿಯೊಂದು ಸಾಲಕ್ಕೂ ವಿಮೆ ಜಾರಿಗೊಳಿಸುವ ಪ್ರಸ್ತಾಪವನ್ನು ಆಡಳಿತ ಮಂಡಳಿ ಸಭೆಯಲ್ಲಿ ಮಂಡಿಸಿತು. ಇದಕ್ಕೆ ಸದಸ್ಯರು ಒಪ್ಪಿಗೆ ಸೂಚಿಸಿದರು. ಆದರೆ, ಪರಿಣಿತರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಯಾವುದೇ ಕಾರಣಕ್ಕೂ ಸಂಘಕ್ಕೆ ನಷ್ಟ ಉಂಟಾಗದ ರೀತಿಯಲ್ಲಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಡೀಕಯ್ಯ ಎಂ.ಕೆ. ಹಾಗೂ ನಿರ್ದೇಶಕರಾದ ವಿಜಯ್ ಕುಮಾರ್ ಎಚ್., ಆನಂದಗೌಡ ಎಂ., ಕೆ. ರಮೇಶ್ ರಾವ್, ಕೆ. ಹೇಮಂತ್ ಗೌಡ, ಜಯರಾಂ ಪಾಳಂದೈ ಎಸ್., ಗಾಯತ್ರಿ ಎಚ್. ಗೌಡ, ವಿಜಯಲಕ್ಷ್ಮಿ ಕೆ., ರಾಜು, ಮೋಹನ ಪೂಜಾರಿ, ಧನಂಜಯ ಬಿ. ಹಾಗೂ ವಲಯ ಮೇಲ್ವಿಚಾರಕ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಪಿ. ವಾರ್ಷಿಕ ವರದಿ ಮಂಡಿಸಿದರು. ಲೆಕ್ಕಿಗ ವೇಣುಗೋಪಾಲ್ ಬಿ. ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಸಂಘದ ನಿರ್ದೇಶಕಿ ಗಾಯತ್ರಿ ಹೆಚ್. ಪ್ರಾರ್ಥಿಸಿದರು. ನಿರ್ದೇಶಕ ಕೆ. ರಮೇಶ್ ರಾವ್ ಸ್ವಾಗತಿಸಿ, ನಿರ್ದೇಶಕಿ ವಿಜಯಲಕ್ಷ್ಮೀ ಕೆ.ಧನ್ಯವಾದ ಅರ್ಪಿಸಿದರು. ಸಭೆಯ ಯಶಸ್ವಿಗೆ ಸಂಘದ ಸಿಬ್ಬಂದಿಗಳು ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya
error: Content is protected !!