32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಇವರ ಅಧ್ಯಕ್ಷತೆಯಲ್ಲಿ ಆ.29 ರಂದು ನಡೆಯಿತು.

ಆರ್ಥಿಕ ವರ್ಷದಲ್ಲಿ ಸಂಘವು ರೂ 204 ಕೋಟಿ ವ್ಯವಹಾರ ನಡೆಸಿ,ರೂ1.9 ಕೋಟಿ ನಿವ್ವಳ ಲಾಭ ಗಳಿಸಿದೆ.‌ಸದಸ್ಯರಿಗೆ ಶೇ 16.5 ಡಿವಿಡೆಂಟ್ ನೀಡಲಾಗುವುದು ಎಂದು ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಹೇಳಿದರು.

ವರದಿ ಸಾಲಿನಲ್ಲಿ ಸಂಘವು ರೈತ ಸದಸ್ಯರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಸದಸ್ಯರು ಪ್ರಯೋಜನ ಪಡೆಯಬಹುದಾಗಿದೆ ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್, ಸಿಇಒ ಸುಕೇಶಿನಿ, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ., ರಾಮು, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ, ಉಮೇಶ್, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸುದರ್ಶನ್, ಸೊಸೈಟಿ ಲೆಕ್ಕಿಗ ಸುಜಯ, ಮಾಜಿ ಅಧ್ಯಕ್ಷರುಗಳು,ಸಿಬ್ಬಂದಿಗಳಾದ ಉಮೇಶ್, ಆನಂದ, ರಂಜಿತ್ ಸೇರಿದಂತೆ ಸೊಸೈಟಿ ಸದಸ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya
error: Content is protected !!