27.6 C
ಪುತ್ತೂರು, ಬೆಳ್ತಂಗಡಿ
October 16, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  ನಿವೃತ್ತ  ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡರಿಗೆ  ಬೀಳ್ಕೊಡುಗೆ

ಬಂಗಾಡಿ:  ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಗುಮಾಸ್ತರಾಗಿ, ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತಿ ಹೊಂದಿದ ಚಂದ್ರಕಾಂತ ಗೌಡ ಎ. ಇವರಿಗೆ ಬೀಳ್ಕೊಡುಗೆ ಸಮಾರಂಭ ಆ. 29ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರತಾಪ್ ಸಿಂಹ ನಾಯಕ್,  ಮಂಗಳೂರು ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಸುಮಾ ಚಂದ್ರಕಾಂತ ಗೌಡ ಎ., ಸಂಘದ ಉಪಾಧ್ಯಕ್ಷ ಆನಂದ ಗೌಡ ಬಿ., ನಿರ್ದೇಶಕರಾದ ಕೆ.ಪುಷ್ಪಲತಾ, ಕೆ.ವಸಂತ ಗೌಡ, ರಮೇಶ್ ಕೆಂಗಾಜೆ, ವಿನಯಚಂದ್ರ,ರಘುನಾಥ,ಸತೀಶ್ ನಾಯ್ಕ, ಶೀನಪ್ಪ ಗೌಡ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಹಾಗೂ ವೇದಾವತಿ ಉಪಸ್ಥಿತರಿದ್ದರು.

ಸಿಇಒ ದಯಾನಂದ ಶೆಟ್ಟಿಗಾರ್ ಕೆ. ಸನ್ಮಾನ ಪತ್ರ ವಾಚಿಸಿದರು.  ಮಲ್ಲಿಕಾ ಮಿತ್ತಬಾಗಿಲು ಪ್ರಾರ್ಥಿಸಿದರು. ಸಿಬ್ಬಂದಿಗಳಾದ ರಮಾನಂದ ಮತ್ತು ಸತೀಶ್ ಸಾಲಿಯಾನ್ ನಾವೂರ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರು , ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya
error: Content is protected !!