October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

ಕರಿಮಣೇಲು: ಬ್ರೈಟ್ ಹೊರೈಝನ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ ಸ್ವೀಕಾರ ಸಮಾರಂಭವು ಆ.29ರಂದು ನಡೆಯಿತು.

ಮುಖ್ಯ ಅತಿಥಿ, ಬೆಳ್ತಂಗಡಿ ಕ್ಷೇತ್ರದ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಭಾಷೆಯ ಬಗ್ಗೆಯೂ ಕೀಳರಿಮೆ ಹೊಂದದೆ, ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯನ್ನು ಗೌರವಿಸಬೇಕು ಎಂದರು.

ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದೆ. ವಿದ್ಯಾಭ್ಯಾಸದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲೂ ಭಾಗವಹಿಸಿ, ಜೀವನದಲ್ಲಿ ಎದುರಾಗುವ ಸೋಲು-ಸವಾಲುಗಳನ್ನು ಧೈರ್ಯ ಹಾಗೂ ಸ್ಥೈರ್ಯದಿಂದ ಎದುರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಂತರ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಚುನಾವಣೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಶರತ್ ಗೋರೆ, ಕಾರ್ಯದರ್ಶಿ ಶಾಂಭವಿ, ಪ್ರಾಂಶುಪಾಲ ಡಾ. ಶಶಿಧರ್, ಶೈಕ್ಷಣಿಕ ಮುಖ್ಯಸ್ಥೆ ಜೆಸಿಂಥ ಡಿ. ಕುನ್ಹ ಹಾಗೂ ಕ್ಯಾಂಪಸ್ ಹೆಡ್ ಪ್ರಖ್ಯಾತ್ ಭಂಡಾರಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!