32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಉಪನ್ಯಾಸಕ ಅವನೀಶ್ ವಿದ್ಯಾರ್ಥಿಗಳಿಗೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ಚಿಕಿತ್ಸೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿ, ಪ್ರೊಜೆಕ್ಟರ್ ಮೂಲಕ ಸಂಬಂಧಿತ ವಿಡಿಯೋವನ್ನು ಪ್ರದರ್ಶಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಮಾತನಾಡಿ, ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು, ಅಗತ್ಯ ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತಿಳಿದಿರುವ ಮಾಹಿತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳಾದ ಮೋನಪ್ಪ ಗೌಡ ಮತ್ತು ರಂಜಿತ್ ಕುಮಾರ್, ಶಾಲಾ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

ಜೂನಿಯರ್ ರೆಡ್ ಕ್ರಾಸ್ ಸಂಯೋಜಕರಾದ ವಿಶ್ವನಾಥ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನಿಶಾನ್ಯ ಅತಿಥಿಗಳ ಪರಿಚಯ ಮಾಡಿದರು. ಧನ್ವಿನ್ ವಂದಿಸಿದರು. ಕಾವ್ಯ ಮತ್ತು ಭಾಗ್ಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!