32.5 C
ಪುತ್ತೂರು, ಬೆಳ್ತಂಗಡಿ
October 15, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ

ಬೆಳ್ತಂಗಡಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪ್ರತಿಭೆ ನಿರೀಕ್ಷ ಎನ್. ಪೂಜಾರಿ ದ್ವಿತೀಯ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಇವರು ಮರೋಡಿ ಗ್ರಾಮದ ನವೀನ್ ಸಾಲಿಯಾನ್ ಮತ್ತು ರೂಪ ದಂಪತಿಗಳ ಮಗಳಗಿದ್ದು,ನಾರಾಯಣ ಗುರುಗಳ ಜೀವನ ಮತ್ತು ತತ್ವದರ್ಶಗಳು ಭಾರತೀಯ ಸಮಾಜಕ್ಕೆ ದಿಕ್ಕೂಚಿ’ಎಂಬ ವಿಷಯದ ಬಗ್ಗೆ ನಿರೀಕ್ಷ ಅವರು ಅತ್ಯುತ್ತಮವಾಗಿ ಭಾಷಣ ಮಾಡಿ ಗಮನ ಸೆಳೆದಿದ್ದರು. ಪ್ರಸ್ತುತ ಇವರು ಆಳ್ವಾಸ್‌ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಇದಕ್ಕೂ ಮೊದಲು ಬೆಳ್ತಂಗಡಿ ಬಿಲ್ಲವ ಸಂಘದಲ್ಲಿ ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಸಾಧಕ ವಿದ್ಯಾರ್ಥಿನಿಗೆ ಬಿಲ್ಲವ ಸಮಾಜದ ಮುಖಂಡರು, ಯುವ ವೇದಿಕೆ ಪದಾಧಿಕಾರಿಗಳು ಮತ್ತು ಬೆಳ್ತಂಗಡಿ ತಾಲೂಕಿನ ಬಿಲ್ಲವ ಬಾಂಧವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಮಚ್ಚಿನ: ಕುದ್ರಡ್ಕ ಭಜನೋತ್ಸವ-2026 ಕಾರ್ಯಕ್ರಮ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
error: Content is protected !!