32.5 C
ಪುತ್ತೂರು, ಬೆಳ್ತಂಗಡಿ
October 15, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಗುರುವಾಯನಕೆರೆ: ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆ.29ರಂದು ನಡೆದ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಣಿಕ ಎಚ್. ಅವರು ಅಂಡರ್-60 ಕೆ.ಜಿ. ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾಗಿದ್ದಾರೆ.

ಈ ಸಾಧನೆಯೊಂದಿಗೆ ಮಧ್ಯಪ್ರದೇಶದ ದಿವಾಸ್ ಸಿಟಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ. ಮಂಡ್ಯದ ಹರೀಶ್ ಹಾಗೂ ಸವಿತಾ ದಂಪತಿಯ ಪುತ್ರಿಯಾಗಿರುವ ವರ್ಣಿಕ ಅವರು ಸ್ಟಾನ್ಲಿ ಪಿಂಟೋ ಅವರಿಂದ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!