25.5 C
ಪುತ್ತೂರು, ಬೆಳ್ತಂಗಡಿ
October 15, 2026
ಅಪಘಾತಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ಮನೆ ಪಕ್ಕದಲ್ಲಿದ್ದ ಅಂಬಟೆ ಮರದಿಂದ ಆಕಸ್ಮಿಕವಾಗಿ ಪಕ್ಕದ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ.

ಶಿರ್ಲಾಲು ಗ್ರಾಮದ ಕೃಷ್ಣಪ್ಪ (23ವ) ಮೃತ ವ್ಯಕ್ತಿ. ಆ.25ರಂದು ಮನೆ ಸಮೀಪದ ಅಂಬಟೆ ಮರದಿಂದ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದ ಕೃಷ್ಣಪ್ಪ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಆ.27ರಂದು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya
error: Content is protected !!