October 15, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಾಧಕರು

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಆ.30ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಚಿಕ್ಕಬಳ್ಳಾಪುರದ ನಾಗನಾಥೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು ಹಾಗೂ ಸುಶೀಲಾ ಪ್ರಿಯದರ್ಶಿನಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಕಿ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ. ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ನಿರ್ಮಿತ್ ಕನ್‌ಸ್ಟ್ರಕ್ಷನ್‌ನ ಹರೀಶ್ ಹೆಗ್ಡೆ ಅವರನ್ನು ಸಹ ಸನ್ಮಾನಿಸಲಾಯಿತು.

ಪ್ರತಿಷ್ಠಾನದ ಟ್ರಸ್ಟಿ ಡಾ. ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿದರು. ಸುಧಾಮಣಿ ರಮಾನಂದ ನಿರೂಪಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು.‌ಟ್ರಸ್ಟಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!